ಕಾಂಗ್ರೆಸ್ ಶಾಸಕ ಹಿರಿಯ ನಾಯಕಶಾಮನೂರು ಶಿವಶಂಕರಪ್ಪ ನಿಧನ



(ನ್ಯೂಸ್‌ ಕಡಬ) newskadaba.com,  ಡಿ.15 ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.





ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆಗಲೇ ಬೇರೆ ಬೇರೆ ಸುದ್ದಿ ಹರಿದಾಡಿದ್ದರಿಂದ ಈ ಬಗ್ಗೆ ಪುತ್ರ, ಸಚಿವ ಎಸ್​​ಎಸ್​ ಮಲ್ಲಿಕಾರ್ಜುನ ಆವರು ಪ್ರತಿಕ್ರಿಯಿಸಿ ತಮ್ಮ ತಂದೆ ಚೆನ್ನಾಗಿದ್ದಾರೆ. ಗುರು ಹಿರಿಯರ ಆಶೀರ್ವಾದದಿಂದ ಇನ್ನೊಂದು ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ ಎಂದು ಹೇಳಿದ್ದರು.






ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದ್ದರು. ಹಾಗೇ ಅದೇ ವೇಳೆ ಆಸ್ಪತ್ರೆಯಲ್ಲಿದ್ದ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಮ್ಮ ಮಾವನ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆ ಕುರಿತು ಸಿಎಂಗೆ ವಿವರಿಸಿದ್ದರು.. ಇನ್ನು ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅವರ ಅಭಿಮಾನಿಳಿಂದ ಪ್ರಾರ್ಥನೆ, ಪೂಜೆಗಳು ನಡೆದಿದ್ದವು.

error: Content is protected !!
Scroll to Top