ಮಂಗಳೂರು: ಬೈಕ್ಕಳ್ಳತನ ಮತ್ತು ಸರಗಳ್ಳತನದ ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ



(ನ್ಯೂಸ್‌ ಕಡಬ) newskadaba.com,ಡಿ.17: ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  FZ ಬೈಕ್‌ ಕಳ್ಳತನ ಮತ್ತು ವಯೋವೃದ್ದೆಯ ಮಹಿಳೆಯಿಂದ ಚಿನ್ನದ ಸರ ಕಸಿದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್‌ ರಾಜ್ಯ ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬಂಧಿತ ಆರೋಪಿಗಳು ಉಳ್ಳಾಲದ ನ್ಯೂ ತೋಟ   ಹೌಸ್ ನ ಪೈಸಲ್‌, ಮೈಸೂರಿನ ವಿನಾಯಕ ನಗರದ ನಿತೀನ್  ಕುಮಾರ್ ಎಂದು ಗುರುತಿಸಲಾಗಿದೆ.





ಡಿ.೧೨ ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  FZ   ಕಂಪನಿಯ  KA-19-ER-7755 ನಂಬರ್‌ ಬೈಕ್‌ ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಫರಾಧ ವಿಭಾಗದ ಸಿಬ್ಬಂದಿಗಳಿಗೆ ದೊರೆತ ಖಚಿತ ಮಾಹಿತಿಯಂತೆ 16 ರಂದು ಪ್ರಕರಣದ ಪ್ರಮುಖ ಆರೋಪಿ ಪೈಸಲ್‌, ನಿತೀನ್‌ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಡಿ. 13 ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ಭಟ್ಕಳ ತಾಲೂಕಿನಲ್ಲಿ ವಯೋವೃದ್ದ ಮಹಿಳೆಯಾದ ಹೊನ್ನಮ್ಮ ಮಹಾದೇವ ನಾಯ್ಕ್ [ 70 ವರ್ಷ] ರವರ ಕುತ್ತಿಗೆಯಿಂದ ಚಿನ್ನದ ಚೈನ್ ನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಬಾಯಿ ಬಿಟ್ಟಿದ್ದಾರೆ.






ಆರೋಪಿಗಳಿಂದ ಚಿನ್ನದ ಸರ-1, ಇದರ ಅಂದಾಜು ಮೌಲ್ಯ ರೂ 1,20,000 ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಬೈಕ್-1 ಅಂದಾಜು ಮೌಲ್ಯ ರೂ  45,000 ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಪೈಸಲ್ ವಿರುದ್ದ ಉಡುಪಿ ಕಾರ್ಕಳ, ಮಣಿಪಾಲ .ಮಂಗಳೂರು. ಬೆಳ್ತಂಗಡಿ, ವಿಟ್ಲ, ಕಂಕನಾಡಿ ನಗರ ಪೊಲೀಸ್ ಠಾಣೆ, ಪುತ್ತೂರು, ಶಿರ್ವ ಸುರತ್ಕಲ್, ಕಡಬ, ಕೊಣಾಜೆ, ಮಡಿಕೇರಿಯ ಕುಶಾಲ ನಗರ,  ಹಾಗೂ ಕೇರಳ ರಾಜ್ಯಗಳಲ್ಲಿ ರಾಬರಿ, ದರೋಡೆ, ಕಳ್ಳತನದ ಮತ್ತು ಕೊಲೆ ಪ್ರಕರಣ ಸೇರಿದಂತೆ  ಸುಮಾರು 42 ಪ್ರಕರಣಗಳು ದಾಖಲಾಗಿದೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ 10 ಕ್ಕಿಂತಲೂ ಹೆಚ್ಚು ಜಾಮೀನು ರಹಿತ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆ ತಪ್ಪಿಸಿಕೊಂಡಿದ್ದಾನೆ.

ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮನಾಭ, ಪಿಎಸ್ಐ ಮನೋಹರ್ ಪ್ರಸಾದ್, ಎ.ಎಸ್.ಐ.ಗಳಾದ ಚಂದ್ರಶೇಖರ್, ಸುಧಾಕರ್ ರಾವ್, ರಾಜಶೇಖರ್, ಹೆಚ್.ಸಿ.ಗಳಾದ ಲೋಕೆಶ್, ಸಂತೋಷ್ ಡಿ.ಕೆ. ಸುರೇಶ್, ದಿಲೀಪ್, ಮೋಹನ್, ಮಲ್ಲಪ್ಪ ಬಿ. ಮತ್ತು ಪಿ.ಸಿ.ಗಳಾದ ಸುನೀಲ್, ಮಣಿಕಂಠ, ಮೌಲಾ ಅಹಮ್ಮದ್ ಮತ್ತು ಮಂಜುನಾಥ ವಡ್ಡರ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

error: Content is protected !!
Scroll to Top