ಇನ್ಮುಂದೆ ಕಡಬ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ಸವಾರರಿಬ್ಬರಿಗೂ ಹೆಲ್ಮೆಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.21. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಕಡಬ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಕೆ ಅತ್ಯಂತ ಅವಶ್ಯಕವಾಗಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ, ತಮ್ಮ ಹಾಗೂ ಇತರರ ಜೀವ ರಕ್ಷಣೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Scroll to Top