ಕಡಬ, ಡಿ.22. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆಯು ಡಿಸೆಂಬರ್ 28 ರಂದು ಕಡಬ ಸೌರಭ ಟವರ್ಸ್ ನಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ.
ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಉಚಿತ ಶಿಬಿರವನ್ನು ಆಯೋಜಿಸಿದ್ದು ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಟೀಮ್ ಈಶ್ವರ್ ಮಲ್ಪೆ ತಂಡ ಶ್ರವಣದ ಯಂತ್ರಕ್ಕೆ (Hearing Machine) ಆಗುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸುತ್ತಿದೆ. ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯೆ ಡಾ| ಅಂಕಿತಾ ಕಲ್ಯಾಡಿ ಅವರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಟೀಮ್ ಈಶ್ವರ್ ಮಲ್ಪೆ ಮತ್ತು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 8971270256, 9448446145 ಅಥವಾ 8951804399 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.












