ಇಂದಿನ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com,ಡಿ.23: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೊಂಚ ಕಡಿಮೆಯಾಗಿದ್ದ ಚಳಿ ಮತ್ತೆ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.





ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‍ಗೆ ತೆರಳದಂತೆ ಸಲಹೆ ನೀಡಿದ್ದಾರೆ.






ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

error: Content is protected !!
Scroll to Top