ಚಿನ್ನ ಈ ವರ್ಷದ ಗರಿಷ್ಠ ಬೆಲೆ ದಾಖಲು



(ನ್ಯೂಸ್‌ ಕಡಬ) newskadaba.com,ಡಿ.23 ಬೆಂಗಳೂರು: ಹಿಂದೆಂದೂ ಕಂಡರಿಯದ ರೀತಿಯಲ್ಲಿ ಚಿನ್ನದ ಬೆಲೆ ಇಂದು ಒಂದೇ ದಿನಕ್ಕೆ ದಾಖಲೆ ಮಟ್ಟದಲ್ಲಿ ಹೆಚ್ಚಳ ಆಗಿದೆ. ಇಂದು ಚಿನ್ನದ ಗರಿಷ್ಠ ಬೆಲೆ 13,855 ರೂ ದಾಖಲಾಗಿದೆ. ಒಂದೇ ದಿನಕ್ಕೆ 2400 ರೂ ಏರಿಕೆ ಆಗುವ ಮೂಲಕ ಚಿನ್ನಾಭರಣ ಪ್ರಿಯರಿಗೆ ಶಾಕ್ ನೀಡಿದೆ.





ಡಿಸೆಂಬರ್ 23 ಮಂಗಳವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13855 ರೂಪಾಯಿ ಇದ್ದು, ಇಂದು 240 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,38,550 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 2400 ರೂ ಹೆಚ್ಚಳ ಆಗಿದೆ.






22 ಕ್ಯಾರೆಟ್ ಚಿನ್ನದ ಬೆಲೆ
22 ಕ್ಯಾರೆಟ್ 1 ಗ್ರಾಂ ಬೆಲೆ 12700 ರೂಪಾಯಿ ಇದ್ದು, ಇಂದು 220 ರೂ ಏರಿಕೆ ಆಗಿದೆ. 10 ಗ್ರಾಂ ಬೆಲೆ 1,27,000 ರೂಪಾಯಿ ಇದೆ. ಇಂದು 10 ಗ್ರಾಂ ನಲ್ಲಿ 2200 ರೂ ಹೆಚ್ಚಳ ಆಗಿದೆ.
ಬೆಂಗಳೂರಲ್ಲಿ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 13855 ರೂಪಾಯಿ ಇದ್ದು, 10 ಗ್ರಾಂ ಶುದ್ಧ ಚಿನ್ನಕ್ಕೆ 1,38,550 ರೂಪಾಯಿ ಇದೆ. ಈ ಬೆಲೆಯಲ್ಲಿ ಜಿಎಸ್‌ಟಿ ಸೇರಿಲ್ಲ, ಹೀಗಾಗಿ ಮಳಿಗೆಗಳಲ್ಲಿ ವ್ಯತ್ಯಾಸ ಇರಲಿದೆ

error: Content is protected !!
Scroll to Top