ಮೈಸೂರು: ಅರಮನೆ ಆವರಣದಲ್ಲಿ ನೈಟ್ರೋಜನ್ ಗ್ಯಾಸ್ ಸ್ಪೋಟ – ಓರ್ವ ಸಾವು

(ನ್ಯೂಸ್‌ ಕಡಬ)com,ಡಿ.26: ಮೈಸೂರು ಅರಮನೆಯ ಮುಂಭಾಗ ನೈಟ್ರೋಜನ್ ಗ್ಯಾಸ್ ಸ್ಪೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ದೇಹ ಛಿದ್ರಗೊಂಡಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗೆ ಸಂಬಂಧಿಸಿದಂತೆ ಅರಮನೆ ಆವರಣದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Scroll to Top