(ನ್ಯೂಸ್ ಕಡಬ)com,ಡಿ.26: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರು ನೀಡಿದೆ.
ಈ ಸಂಬಂಧ ಜೆಡಿಎಸ್ ಬೆಂಗಳೂರು ನಗರ ಕಾನೂನು ಘಟಕದ ಅಧ್ಯಕ್ಷ ಪ್ರದೀಪ್‌ಕುಮಾರ್ ಎಸ್.ಪಿ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಹಾಲುಮತ ಹಿತರಕ್ಷಣಾ ಪ್ರಾಂಶುಪಾಲರಾದ ಮಂಜುನಾಥ್ ಒಕ್ಕಲಿಗ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಪ್ರಸನ್ನಕುಮಾರ್ ಎಂಬುವರು ಸಾಮಾಜಿಕ ಜಾಲತಾಣಗಳಲ್ಲಿ ದೇವೇಗೌಡರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಜುನಾಥ್ ಮತ್ತು ಪ್ರಸನ್ನಕುಮಾರ್ ಅವರು ದೂರವಾಣಿಯಲ್ಲಿ ಮಾತನಾಡುವಾಗ ಎಚ್.ಡಿ.ದೇವೇಗೌಡರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಚಾರಿತ್ರ್ಯಹರಣ ಮಾಡಿದ್ದಾರೆ. ಅನವಶ್ಯಕವಾಗಿ ಜಾತಿಯನ್ನು ಎಳೆದುತಂದಿದ್ದಾರೆ. ಅಲ್ಲದೆ, ಅವರಿಬ್ಬರ ಸಂಭಾಷಣೆಯು ಫೇಸ್‌ಬುಕ್, ಟ್ವಿಟ್ಟರ್, ಯು-ಟ್ಯೂಬ್ ಹಾಗೂ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ.












