ರಾತ್ರಿ ವೇಳೆ ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ

(ನ್ಯೂಸ್‌ ಕಡಬ)com,ಡಿ.26: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಲಾರಿ ಡಿಕ್ಕಿ ಹೊಡೆದು ಬಸ್‌ ಬೆಂಕಿ ಹೊತ್ತಿಕೊಂಡು ಉರಿದು 7 ಮಂದಿ ಸಜೀವ ದಹನಗೊಂಡಿದ್ದ ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರೋದು. ಹೀಗಾಗಿ ರಾತ್ರಿ ಸಮಯ ಸಂಚಾರ ಮಾಡೋರು ಸಂಜೆಯೇ ನಿದ್ದೆ ಮಾಡಿ ಎದ್ದರೇ ಒಳ್ಳೆಯದು. ಈ ನಿದ್ದೆ ಮಂಪರಿನಿಂದ ಆಗೋ ಅನಾಹುತ ತಪ್ಪಿಸಲು ಚಾಲಕರು ಕೆಲಸಮಯ ವಾಹನಗಳನ್ನ ನಿಲ್ಲಿಸಿ ವಿಶ್ರಾಂತಿ ಮಾಡಬೇಕು. ಅದರಲ್ಲೂ ಮಧ್ಯರಾತ್ರಿ 12ರಿಂದ 4 ಗಂಟೆವರೆಗೆ ನಾಲ್ಕು ಗಂಟೆಗಳ ಕಾಲ ನ್ಯಾಷನಲ್ ಹೈವೇಗಳ ಬೇಸ್‌ಗಳಲ್ಲಿ ವಿಶ್ರಾಂತಿ ಪಡೆಯುವಂತೆ ಹೊಸ ಗೈಡ್‌ಲೈನ್ಸ್ ಅನ್ನು ಕೇಂದ್ರ ಸರ್ಕಾರ ರೂಪಿಸುವಂತೆ ಪತ್ರ ಬರೆಯುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Scroll to Top