(ನ್ಯೂಸ್ ಕಡಬ) newskadaba.com,ಡಿ.29 ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಟಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 501 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 12 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ iocl.com ಅಥವಾ ಅಪ್ರೆಂಟಿಸ್ಶಿಪ್ ಪೋರ್ಟಲ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಒಂದು ವರ್ಷದ ಅವಧಿಗೆ ಈ ನೇಮಕಾತಿ ನಡೆಯಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಐಟಿಐ, ಡಿಪ್ಲೊಮಾ ಹಾಗೂ ಬಿಎ, ಬಿಎಸ್ಸಿ, ಬಿಕಾಂ ಪದವಿಯನ್ನು ಹೊಂದಿರಬೇಕು.
ವಯೋಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾ, ಪ. ಪಂ ಅಭ್ಯರ್ಥಿಗಳಿಗೆ 05 ವರ್ಷಗಳು ಹಾಗೂ ವಿಕಲಚೇತನ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.








