ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ



(ನ್ಯೂಸ್‌ ಕಡಬ) newskadaba.com,ಡಿ.29 ಮಂಗಳೂರು: ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ರೈಲ್ವೆ ಮಾರ್ಗವಾಗಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನು ರೈಲ್ವೆ ಇಲಾಖೆ ಪೂರ್ಣಗೊಳಿಸಿದ್ದು, ಪ್ರಯೋಗಾತ್ಮಕವಾಗಿ ವಿದ್ಯುತ್ ಲೋಕೊಮೋಟಿವ್ ಚಾಲನೆಯನ್ನು ಭಾನುವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ.





ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ಕೆಲಸವಾಗಿರುವ ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಲೋ ಮೀಟರ್​ ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿದೆ. ವಿದ್ಯುದೀಕರಣ ಕಾರ್ಯವು 2023ರ ಡಿಸೆಂಬರ್‌ 1ರಂದು ಆರಂಭಗೊಂಡು, ₹93.55 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದೆ. ಈ ಯೋಜನೆಯಡಿ ಮಾರ್ಗದೊಳಗೆ ಐದು ಸ್ವಿಚಿಂಗ್ ಸ್ಟೇಷನ್‌ಗಳ ನಿರ್ಮಾಣ ಹಾಗೂ ಸಂಪೂರ್ಣ ವಿಭಾಗದಲ್ಲಿ ಮೇಲ್ಮೈ ವಿದ್ಯುದೀಕರಣ ಕಾರ್ಯ ಕೈಗೊಳ್ಳಲಾಗಿದೆ.






ಮೇಲ್ಮೈ ವಿದ್ಯುತ್ ವ್ಯವಸ್ಥೆಯನ್ನು ಗರಿಷ್ಠ 120 ಕಿಮೀ ಪ್ರತಿ ಗಂಟೆ ವೇಗಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದ್ದು, ಎರಡು ವಿದ್ಯುತ್ ಕಂಬಗಳ ನಡುವಿನ ಗರಿಷ್ಠ ಅಂತರವನ್ನು 67.5 ಮೀಟರ್‌ಗೆ ಮಿತಿಗೊಳಿಸಲಾಗಿದೆ. ಇದರಿಂದ ಕಾರ್ಯಾಚರಣಾ ಸುರಕ್ಷತೆ ಮತ್ತು ವಿಶ್ವಾಸಾರ್ಹತೆ ಖಚಿತಗೊಂಡಿದೆ.ಈ ವಿಭಾಗದಲ್ಲಿರುವ 57 ಸುರಂಗಗಳಲ್ಲಿ, ಮೇಲ್ಮೈ ವಿದ್ಯುತ್ ಸಾಧನಗಳ ಅಳವಡಿಕೆಗೆ 419 ಮುಖ್ಯ ಬ್ರಾಕೆಟ್‌ಗಳು ಮತ್ತು 419 ಹೆಚ್ಚುವರಿ (ಸ್ಪೇರ್) ಬ್ರಾಕೆಟ್‌ಗಳನ್ನು ಒದಗಿಸಲಾಗಿದೆ. ಪ್ರತಿಯೊಂದು ಬ್ರಾಕೆಟ್ ಸ್ಥಳದಲ್ಲಿಯೂ ಬೋಲ್ಟ್‌ಗಳ ಸಮರ್ಪಕ ಗ್ರೌಟಿಂಗ್ ಮತ್ತು ದೀರ್ಘಕಾಲೀನ ಸ್ಥಿರತೆಯನ್ನು ಖಚಿತಪಡಿಸಲು ಪುಲ್-ಔಟ್ ಪರೀಕ್ಷೆಗಳನ್ನು ನಡೆಸಲಾಗಿದೆ.

error: Content is protected !!
Scroll to Top