(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಇತ್ತೀಚೆಗೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಜುಲೈ 4 ರಂದು ರಾತ್ರಿ ಶರತ್ ಬಿ.ಸಿ.ರೋಡ್‌ನ ತನ್ನ ತಂದೆಯ ಲಾಂಡ್ರಿಯಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡವೊಂದು ಅಂಗಡಿಗೆ ನುಗ್ಗಿ ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಮಂಗಳೂರಿಗೆ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ.