(ನ್ಯೂಸ್ ಕಡಬ) newskadaba.com,ಡಿ.31: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಜ.3ರವರೆಗೂ ಚಳಿಯ ವಾತಾವರಣ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.








