ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ► ಫಲಿತಾಂಶ ಪಡೆಯಲು ಕ್ಲಿಕ್ ಮಾಡಿ



(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.06. ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶವು ಮೇ 07 ಸೋಮವಾರದಂದು ಪ್ರಕಟವಾಗಲಿದ್ದು, ಮೇ 08 ಮಂಗಳವಾರದಂದು ರಾಜ್ಯದ ಎಲ್ಲ ಪ್ರೌಢಶಾಲೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.







ಬೆಳಿಗ್ಗೆ 11 ಗಂಟೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ 01 ಗಂಟೆಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 8,54,424 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದರು. ಫಲಿತಾಂಶ ಪಡೆಯಲು http://sslc.kar.nic.in ಅಥವಾ http://karresults.nic.in ನ್ನು ಕ್ಲಿಕ್ ಮಾಡಿ.






error: Content is protected !!
Scroll to Top