ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.05: ಮುಂದಿನ 2 ದಿನಗಳ ಕಾಲ ರಾಜ್ಯದ ಕೆಲವೆಡೆ ತಾಪಮಾನ ಕುಸಿಯಲಿದ್ದು, ಚಳಿ ಹೆಚ್ಚಾಗಿರಲಿದೆ. ಸಂಜೆ ಹಾಗೂ ಮುಂಜಾನೆಯ ವೇಳೆ ಹೆಚ್ಚಿನ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top