.ಗುರುಪುರ : ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ



(ನ್ಯೂಸ್‌ ಕಡಬ) newskadaba.com, ಜ.06 ಮಂಗಳೂರು: ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಬಂದ ಯುವತಿ, ಸೇತುವೆಯ ಮೇಲೆ ವಾಹನವನ್ನು ನಿಲ್ಲಿಸಿ ನಂತರ ನದಿಗೆ ಜಿಗಿದಿರುವುದು ದೃಢಪಟ್ಟಿದೆ.





ಮೃತ ಯುವತಿಯನ್ನು ಮೂಡಬಿದ್ರೆ ಅಲಂಗಾರು ಜ್ಯುವೆಲರ್ ಅಂಗಡಿಯಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನವ್ಯ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.






ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯುವತಿಯ ಆತ್ಮಹತ್ಯೆಗೆ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!
Scroll to Top