ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ



(ನ್ಯೂಸ್‌ ಕಡಬ) newskadaba.com ,.10: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಒಳನಾಡಿನ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಸಿದೆ.





ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಮೂರರಿಂದ ಆರು ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಿದ್ದರೆ, ಇನ್ನು ಕೆಲ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರಲಿದೆ. ಕಳೆದ 24 ಗಂಟೆಗಳಲ್ಲಿ ವಿಜಯಪುರದಲ್ಲಿ ಶೀತಗಾಳಿ ವಾತಾವರಣ ಕಂಡುಬಂದಿದೆ. ಏತನ್ಮಧ್ಯೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ದುರ್ಬಲಗೊಂಡು ಶನಿವಾರ ಉತ್ತರ ಶ್ರೀಲಂಕಾದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.






error: Content is protected !!
Scroll to Top