ಇಂದಿನ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com, ಜ.14ರವರೆಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಮತ್ತು ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.





ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.






error: Content is protected !!
Scroll to Top