ಶ್ರೀನಗರ: ಗಡಿಯಲ್ಲಿ ಮತ್ತೆ ಡ್ರೋನ್ ಹಾರಿಸಿದ ಪಾಕ್- ಗುಂಡು ಹಾರಿಸಿ ಉರುಳಿಸಿದ ಭಾರತೀಯ ಸೇನೆ

(ನ್ಯೂಸ್‌ ಕಡಬ) newskadaba.com, ಶ್ರೀನಗರ, ಜ. 12 : ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನಿ ಡ್ರೋನ್‌ಗಳ ಭಾರತೀಯ ಸೇನೆ ಭಾನುವಾರ ರಾತ್ರಿ ಗುಂಡು ಹಾರಿಸಿ ಉರುಳಿಸಿದೆ.

ಆಪರೇಷನ್ ಸಿಂಧೂರದ ಸಮಯದಲ್ಲಿ ಯಾವ ರೀತಿ ಡ್ರೋನ್‌ಗಳು ಹಾರಾಟ ನಡೆಸಿದ್ದವು ಅದೇ ರೀತಿಯ ಹಾರಾಟ ಕಂಡು ಬಂದಿತ್ತು. ಡ್ರೋನ್‌ಗಳು ಬಂದೂಕುಗಳು ಅಥವಾ ಮಾದಕವಸ್ತುಗಳನ್ನು ಬೀಳಿಸಿವೆಯೇ ಎಂದು ಪರಿಶೀಲಿಸಲು ಸೇನೆಯು ಪ್ರದೇಶವನ್ನು ಶೋಧಿಸುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ದಿಕ್ಕಿನಿಂದ ಬಂದ ಡ್ರೋನ್ ಒಂದು ಸಾಂಬಾ ಸೆಕ್ಟರ್‌ನಲ್ಲಿ ಶಸ್ತ್ರಾಸ್ತ್ರಗಳ ಸರಕನ್ನು ಬೀಳಿಸಿದೆ ಎಂದು ಸೇನೆ ಮಾಹಿತಿ ನೀಡಿದೆ.

ಮೆಷಿನ್ ಗನ್‌ಗಳು ಈ ಡ್ರೋನ್‌ಗಳನ್ನು ಹೊಡೆದುರುಳಿಸಿವೆ. ಸಂಜೆ 6.35 ಕ್ಕೆ ರಾಜೌರಿ ಜಿಲ್ಲೆಯಲ್ಲಿ ಮತ್ತೊಂದು ಡ್ರೋನ್ ಕಾಣಿಸಿಕೊಂಡಿದೆ. ಸಾಂಬಾದ ರಾಮಗಢ ಸೆಕ್ಟರ್‌ನಲ್ಲಿರುವ ಚಕ್ ಬಾಬ್ರಾಲ್ ಗ್ರಾಮದ ಮೇಲೆ ಸಂಜೆ 7.15 ರ ಸುಮಾರಿಗೆ ಡ್ರೋನ್‌ನಂತಹ ವಸ್ತುವೊಂದು ಕೆಲವು ನಿಮಿಷಗಳ ಕಾಲ ಸುಳಿದಾಡಿತ್ತು ಎನ್ನಲಾಗಿದೆ.

Scroll to Top