ರಿಯಾಲಿಟಿ ಶೋ “ಬಿಗ್ ಬಾಸ್” ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್‌



(ನ್ಯೂಸ್‌ ಕಡಬ) newskadaba.com,: ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿದ ಆರೋಪದಡಿ ಬಿಗ್ ಬಾಸ್ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಿದ್ದ ಹಿನ್ನೆಲೆ, ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್ ಜಾರಿ ಮಾಡಲಾಗಿದೆ. ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ‘ಹೊಂಚು ಹಾಕಿ ಸಂಚು ಮಾಡಿ ಲಬಕ್ ಅಂತ ಹಿಡಿಯುವುದು’ ಎಂದು ಮಾಹಿತಿ ಹರಡಲಾಗಿದೆ. ಹದ್ದು& ರಣಹದ್ದಿಗೂ ಇರುವ ವ್ಯತ್ಯಾಸದ ಬಗ್ಗೆ ಸ್ಪಷ್ಟಿಕರಣ ನೀಡುವಂತೆ, ಪ್ರೋಗ್ರಾಂ ಹೆಡ್‌ಗೆ ನೋಟಿಸ್‌ ನೀಡಿ ಸೂಚನೆ ನೀಡಲಾಗಿದೆ. ರಾಮನಗರ DRFOಸುಷ್ಮಾ ನೋಟಿಸ್‌ ನೀಡಿದ್ದಾರೆ.





error: Content is protected !!
Scroll to Top