ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕಿದರೆ ಗ್ರಾಮವೇ ಸ್ಥಳಾಂತರ



(ನ್ಯೂಸ್‌ ಕಡಬ) newskadaba.com,ಜ.17 : ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈಗ ಗ್ರಾಮವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ.  ನಡೆಯುತ್ತಿರುವ ಉತ್ಖನನದ ವೇಳೆ ಮಹತ್ವದ ಅವಶೇಷ ಸಿಕ್ಕರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್‌ ಶ್ರೀಧರ್‌ ಅವರು ತಿಳಿಸಿದ್ದಾರೆ. ಈ ಮೂಲಕ ಗ್ರಾಮವನ್ನು ಸ್ಥಳಾಂತರಿಸುವ ಮುನ್ಸೂಚನೆ ನೀಡಿದ್ದಾರೆ.





ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿರುವ ಭಾಗಕ್ಕೆ ಸಾರ್ವಜನಿಕರ ಪ್ರವೇಶ ಹಾಗೂ ವೀಡಿಯೊ, ಫೋಟೋಗ್ರಫಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಈ ಆದೇಶ ಹೊರಡಿಸಿದ್ದಾರೆ. ಪುರಾತತ್ವ ಇಲಾಖೆಯ ಶಿಫಾರಸ್ಸಿನ ಮೇರೆಗೆ ಉತ್ಖನನ ಜಾಗವನ್ನ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ಖನನ ಕೆಲಸಕ್ಕೆ ತೊಂದರೆಯಾಗದಿರಲಿ ಎನ್ನುವ ಕಾರಣಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.






error: Content is protected !!
Scroll to Top