ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ ► ಮಂಗಳೂರಿನ ಯುವಕ ಮೃತ್ಯು



(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.08. ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮಂಗಳೂರು ನಿವಾಸಿಯೋರ್ವರು ಮೃತಪಟ್ಟ ಘಟನೆ ಸೌದಿ ಅರೇಬಿಯಾದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.





ಮೃತ ಯುವಕನನ್ನು ಮಂಗಳೂರಿನ ಕಿನ್ನಿಗೋಳಿ ನಿವಾಸಿ ಅಬ್ದುಲ್ ರಹಮಾನ್ ಎಂಬವರ ಪುತ್ರ ಮಹಮ್ಮದ್ ರಾಹಿಲ್ ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ತ ತನ್ನ ಸಹೋದ್ಯೋಗಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ನಿದ್ದೆಯ ಮಂಪರಿನಲ್ಲಿ ಕಾರು ಟ್ರಕ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಾಹಿಲ್ ಮೃತಪಟ್ಟು, ಸಹೋದ್ಯೋಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top