(ನ್ಯೂಸ್ ಕಡಬ) newskadaba.com,ಜ.19: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿದ್ದು, ನಾಲ್ಕು ವರ್ಷಗಳಿಂದ ಹುದ್ದೆಗಳ ಭರ್ತಿಗೆ ಮಾಡದೇ ಇದ್ದರಿಂದ ಗುಣಾತ್ಮಕ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ.
ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಸರಕಾರ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದಲ್ಲಿ430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಆದರೆ, ಸರಿಯಾದ ಮೂಲ ಸೌಕರ್ಯ ಹಾಗೂ ಕಾಲಕಾಲಕ್ಕೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡದಿದ್ದರಿಂದ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ. ಇದರಿಂದ ಖಾಲಿ ಹುದ್ದೆಗಳ ಭರ್ತಿಗೆ ಸರಕಾರ ಕ್ರಮಕೈಗೊಳ್ಳಬೇಕೆಂಬ ಒತ್ತಡ ಕೇಳಿಬರುತ್ತಿದೆ….
ರಾಜ್ಯದಲ್ಲಿ 1026 ಹುದ್ದೆಗಳು ಖಾಲಿ :
ರಾಜ್ಯದ 430 ಸರಕಾರಿ ಪದವಿ ಕಾಲೇಜುಗಳಲ್ಲಿ ಒಟ್ಟು 43 ವಿಷಯಗಳಲ್ಲಿ 7,187 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 1026 ಹುದ್ದೆಗಳು ಪ್ರಸ್ತುತ ಖಾಲಿಯಿವೆ. ಇದರಿಂದ ಈ ಹುದ್ದೆಗಳಿಗೆ ಸರಕಾರ ಆದಷ್ಟು ಬೇಗ ಭರ್ತಿಗೆ ಕ್ರಮಕೈಗೊ ಳ್ಳಬೇಕು ಎಂದು ನಿರುದ್ಯೋಗಿಗಳು ಆಗ್ರಹಿಸುತ್ತಿದ್ದಾರೆ.






