ಗಗನಕ್ಕೇರಿದ ಚಿನ್ನ ಮತ್ತು ಬೆಳ್ಳಿಯ ಬೆಲೆ



(ನ್ಯೂಸ್‌ ಕಡಬ) newskadaba.com,ಜ.19 ಬೆಂಗಳೂರು: ಇಂದು ಒಂದೇ ದಿನ ಬರೋಬ್ಬರಿ 1910 ರೂಪಾಯಿ ಹೆಚ್ಚಳ ಆಗುವ ಮೂಲಕ ಚಿನ್ನದ ಬೆಲೆ ಗರಿಷ್ಠ ಮಟ್ಟಕ್ಕೇರಿದೆ. ಚಿನ್ನದ ದರವು ಸಾರ್ವಕಾಲಿಕ ಗರಿಷ್ಠ ದರವಾದ 1 ಲಕ್ಷದ 45 ಸಾವಿರ 690 ರೂಪಾಯಿಗೆ ಹೆಚ್ಚಳ ಕಂಡಿದೆ.





ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ
ಜನವರಿ 19 2026, ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 14,569 ರೂಪಾಯಿ ಇದ್ದು, ಇಂದು 191 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,45,690 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 1910 ರೂಪಾಯಿ ಏರಿಕೆ ಆಗಿದೆ.






22 ಕ್ಯಾರೆಟ್ ಚಿನ್ನದ ಬೆಲೆ
22 ಕ್ಯಾರೆಟ್ 1 ಗ್ರಾಂ ಬೆಲೆ 13355 ರೂಪಾಯಿ ಇದ್ದು, ಇಂದು 175 ರೂ ಏರಿಕೆ ಆಗಿದೆ. 10 ಗ್ರಾಂ ಬೆಲೆ 1,33,550 ರೂಪಾಯಿ ಇದೆ. ಇಂದು 10 ಗ್ರಾಂ ನಲ್ಲಿ 1750 ರೂ ಏರಿಕೆ ಆಗಿದೆ.

error: Content is protected !!
Scroll to Top