ಚಾರ್ಮಡಿ ಘಾಟ್‌ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಭಸ್ಮ



(ನ್ಯೂಸ್ಕಡಬ) newskadaba.com,.19 : ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ನಡೆದಿದೆ.ನಿರಂತರ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಆತಂಕ ಉಂಟುಮಾಡಿದೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.





ಕೆನ್ನಾಲಿಗೆ ಹಬ್ಬುತ್ತಲೇ ಇದೆ. ಗುಡ್ಡದಲ್ಲಿ ಬೀಸುತ್ತಿರುವ ಭಾರೀ ಗಾಳಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಅಡ್ಡಿಯಾಗಿದೆ.ಚಾರ್ಮಡಿ ಘಾಟ್ ಸಮೀಪದ ಮಲಯ ಮಾರುತದ ಅರಣ್ಯ ಪ್ರದೇಶದಲ್ಲಿ ಬೆಂಕಿ ರಸ್ತೆಯಿಂದ ೨ ಕಿ.ಮೀ. ದೂರದ ಅರಣ್ಯ ಪ್ರದೇಶದವರೆಗೂ ಹಬ್ಬಿದೆ. ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣವಾಗಿ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ. ಚಾರ್ಮಡಿ ಘಾಟಿ ಅರಣ್ಯ ಪ್ರದೇಶದಲ್ಲಿನ ಬೆಂಕಿಯ ಬೆಳಗು ಮುಖ್ಯ ರಸ್ತೆಯವರೆಗೂ ಕಾಣುತ್ತಿದೆ.






ಚಳಿಗಾಲದಲ್ಲಿ ಕಾಡ್ಗಿಚ್ಚು ಹಬ್ಬಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ.ಉದ್ದೇಶಪೂರ್ವಕವಾಗಿ ಯಾರಾದರೂ ಅರಣ್ಯಕ್ಕೆ ಬೆಂಕಿ ಇಟ್ಟಿದ್ದಾರೆಯೇ ಅಥವಾ ಬಿದಿರುಗಳ ಮಧ್ಯೆ ಸಂಘರ್ಷ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆಯೇ ಎಂಬ ಸಂಶಯ ಮೂಡಿದೆ.

error: Content is protected !!
Scroll to Top