ಕೋಡಿಂಬಾಳ: ಕುಮಾರಧಾರಾ ನದಿಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಸ್ನಾನಕ್ಕೆಂದು ನೀರಿಗಿಳಿದ ವ್ಯಕ್ತಿಯೋರ್ವರು ಮುಳುಗಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಕುಮಾರಧಾರಾ ಹೊಳೆಯ ಪಟ್ನ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ದಿ| ಮೇದಪ್ಪ ಗೌಡ ಎಂಬವರ ಪುತ್ರ ಬಾಲಕೃಷ್ಣ ಗೌಡ (35) ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ಸೋಮವಾರ ರಾತ್ರಿ ಸ್ನಾನಕ್ಕಿಳಿದಿದ್ದು, ನೀರು ಪಾಲಾಗಿದ್ದರು. ವಿಷಯ ತಿಳಿದು ಮಂಗಳವಾರ ಬೆಳಿಗ್ಗೆ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಹುಡುಕಾಟದಲ್ಲಿ ತೊಡಗಿದ್ದು, ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top