(ನ್ಯೂಸ್ ಕಡಬ) newskadaba.com,ಜ.20 : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತವೊಂದು ನಡೆದಿದೆ. ಅಗಲಗುರ್ಕಿ ಬಳಿ ಮಂತ್ರಾಲಯಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಟ್ಟು 11 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುಗಮ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಬಸ್ ಮೈಸೂರಿನಿಂದ ಬೆಂಗಳೂರು ಮೂಲಕ ಮಂತ್ರಾಲಯಕ್ಕೆ ತೆರಳುತ್ತಿತ್ತು. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಕ್ಲೀನರ್ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲಕ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
.












