ಸುಳ್ಯ : ಪೋಕ್ಸೋ ಪ್ರಕರಣ – ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ



(ನ್ಯೂಸ್‌ ಕಡಬ) newskadaba.com,ಜ.21 ಸುಳ್ಯ:ಬೆಳ್ಳಾರೆ ಗ್ರಾಮದ ದರ್ಖಾಸು ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ. ಸೆಲ್ವಕುಮಾರ್ ಆರೋಪಿ.





ಆರೋಪಿ ಸೆಲ್ವಕುಮಾರ್ ದರ್ಖಾಸು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, 2020ರ ಏಪ್ರಿಲ್ 1ರಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ನಂತರ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.






ಎರಡೂ ಪಕ್ಷಗಳ ವಾದ ಆಲಿಸಿದ ನ್ಯಾಯಾಧೀಶೆ ಸರಿತಾ ಡಿ., ಆರೋಪಿಯ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ, ಪೊಕ್ಸೋ ಕಾಯ್ದೆಯಡಿ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.20,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ.

 

 

error: Content is protected !!
Scroll to Top