ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ! – News Kadaba

ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ!

(ನ್ಯೂಸ್‌ ಕಡಬ) newskadaba.com,ಜ.21 ನವದೆಹಲಿ: ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿದ್ದ ನಾಸಾ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್​ ಮತ್ತು ಬುಚ್​ ವಿಲ್ಮೋರ್​, ಯಾರೂ ನಿರೀಕ್ಷೆ ಮಾಡದಂತೆ ಅಲ್ಲಿಯೇ ಸಿಲುಕಬೇಕಾಯಿತು.

ಹೋಗಿದ್ದು ಕೇವಲ ಒಂದು ವಾರದ ಕೆಲಸಕ್ಕಾಗಿ ಆದರೆ 9 ತಿಂಗಳು ಅಲ್ಲಿಯೇ ಸಿಲುಕಿದ್ದರು.ಸುನಿತಾ ವಿಲಿಯಮ್ಸ್ ಅವರು ಡಿಸೆಂಬರ್‌ 27ರಂದು (2025) ನಿವೃತ್ತಿಯಾಗಿದ್ದಾರೆ ಎಂದು ನಾಸಾ ಮಂಗಳವಾರ ಘೋಷಣೆ ಮಾಡಿದೆ. ಅವರು 27 ವರ್ಷಗಳ ಕಾಲ ನಾಸಾದ ಗಗನಯಾನಿಯಾಗಿದ್ದರು.

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅವರ ಸೇವೆ ಅಸಾಧಾರಣವಾದುದು, ಅವರ ಯೋಜನೆಗಳು ಚಂದ್ರ ಮತ್ತು ಮಂಗಳ ಗ್ರಹದತ್ತ ತೆರಳುವ ನಮ್ಮ ಪ್ರಯತ್ನಗಳಿಗೆ ಭದ್ರ ಅಡಿಪಾಯ ಹಾಕಿದೆ. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಿವೆ. ನಾಸಾ ಮತ್ತು ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಸೇವೆಗೆ ಧನ್ಯವಾದಗಳು ಎಂದು ನಾಸಾದ ಆಡಳಿತಾಧಿಕಾರಿ ಜಾರೆಡ್ ಐಸಾಕ್‌ಮ್ಯಾನ್ ಹೇಳಿದರು.ಬಾಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ, ಅವರು 286 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಇರಬೇಕಾಯಿತು. ಭಾರತದ ಜನರು ಸಹ ಅವರ ಸುರಕ್ಷಿತ ಮರಳುವಿಕೆಗಾಗಿ ಪ್ರಾರ್ಥಿಸುತ್ತಿದ್ದರು.

 

Scroll to Top