ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರ್ಕಳ: ಮೂರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದು ಮೃತ್ಯು – News Kadaba

ಕಾರ್ಕಳ: ಮೂರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,ಜ.22  ಕಾರ್ಕಳ: ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕುಟುಂಬದ ಸದಸ್ಯರು ನೀರು ಸೇದಲು ಬಾವಿಯ ಬಳಿ ಹೋದಾಗ ಚಿರತೆ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ.

ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಾಯಿಯನ್ನು ಅಟ್ಟಿಸಿಕೊಂಡು ಹೋಗುವಾಗ ಚಿರತೆಯು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ನೇತೃತ್ವದ ತಂಡವು ಚಿರತೆಯ ದೇಹವನ್ನು ಬಾವಿಯಿಂದ ಮೇಲೆತ್ತಿ, ಪಶುವೈದ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿತು. ನಂತರ ನಿಯಮಾನುಸಾರ ಚಿರತೆಯ ಅಂತ್ಯಕ್ರಿಯೆಯನ್ನು ನಡೆಸಲಾಯಿತು.

Scroll to Top