ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸುಳ್ಯಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.08. ರಾಜ್ಯದಲ್ಲಿ ಚುನಾವಣಾ ಕಾವು ಏರಿರುವಂತೆಯೇ ವಿವಿಧ ರಾಜಕೀಯ ಪಕ್ಷಗಳು ತಾರಾ ಪ್ರಚಾರಕರನ್ನು ಕರೆಸಿ ಪ್ರಚಾರ ಮಾಡಿಸುವುದರ‌ ಮೂಲಕ ಕ್ಷೇತ್ರದಲ್ಲಿ ಪಾರುಪತ್ಯ ಸ್ಥಾಪಿಸಲು ಶ್ರಮಿಸುತ್ತವೆ.

ಅದರಂತೆ ಬಿಜೆಪಿ ತಾರಾ ಪ್ರಚಾರಕರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರದಂದು ಸುಳ್ಯ ಶಾಸಕ ಎಸ್.ಅಂಗಾರ ಪರ ಮತ ಯಾಚಿಸಲು ಸುಳ್ಯಕ್ಕೆ ಆಗಮಿಸಲಿದ್ದಾರೆ. ಇಂದು ಅಪರಾಹ್ನ 3 ಗಂಟೆಗೆ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಮುಖ್ಯ ಭಾಷಣ ಮಾಡಲಿದ್ದು, ಬಿಜೆಪಿಯನ್ನು ಗೆಲ್ಲಿಸುವಂತೆ ಕೋರಲಿದ್ದಾರೆ.

Also Read  ಬಸ್‌‌ಗೆ ಪಿಕಪ್ ವಾಹನ ಢಿಕ್ಕಿ - ಇಬ್ಬರು ಅಪಾಯದಿಂದ ಪಾರು

error: Content is protected !!
Scroll to Top