(ನ್ಯೂಸ್ ಕಡಬ) newskadaba.com,ಜ.22 ಬೆಂಗಳೂರು:. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಬರೋಬ್ಬರಿ 572 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ..ಉದ್ಯೋಗ ಸ್ಥಳ: ಬೆಂಗಳೂರು ಸೇರಿ ಭಾರತಾದ್ಯಂತ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಫೆಬ್ರವರಿ 4.
ವಿದ್ಯಾರ್ಹತೆ
ಆರ್‌ಬಿಐ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ ಎಂದು ಅಧಿಸೂಚನೆ ತಿಳಿಸಿದೆ.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳವರೆಗೆ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳು 450 ರುಪಾಯಿ ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಸೈನಿಕ ಅಭ್ಯರ್ಥಿಗಳು 50 ರುಪಾಯಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಆನ್‌ಲೈನ್ ಟೆಸ್ಟ್ ಮತ್ತು ಭಾಷಾ ಪ್ರಾವೀಣ್ಯತೆ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 24,250 ರುಪಾಯಿಂದ 53,550 ರುಪಾಯಿವರೆಗೆ ಮಾಸಿಕ ವೇತನ ದೊರೆಯಲಿದೆ. ಇತರ ಭತ್ಯೆಗಳನ್ನು ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.








