ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.24 : ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣ ಹವೆ ಇರಲಿದ್ದು, ಚಳಿ ಮುಂದುವರೆಯಲಿದೆ. ಬೆಳಗಿನ ಜಾವ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..

ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ 3 ರಿಂದ 4 ದಿನಗಳವರೆಗೆ ಕನಿಷ್ಠ ತಾಪಮಾನ ಸಾಮಾನ್ಯಕಿಂತ ಕಡಿಮೆಯಿರಲಿದೆ ಎಂದು ವರದಿ ಮಾಡಿದೆ..

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top