ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜನಾರ್ದನ ರೆಡ್ಡಿ ಮಾಡೆಲ್‌ ಮನೆಗೆ ಬೆಂಕಿ – ಕೈ ಕಾರ್ಯಕರ್ತರಿಂದ ಕೃತ್ಯ ಆರೋಪ, ಎಫ್‌ಐಆರ್ – News Kadaba

ಜನಾರ್ದನ ರೆಡ್ಡಿ ಮಾಡೆಲ್‌ ಮನೆಗೆ ಬೆಂಕಿ – ಕೈ ಕಾರ್ಯಕರ್ತರಿಂದ ಕೃತ್ಯ ಆರೋಪ, ಎಫ್‌ಐಆರ್

(ನ್ಯೂಸ್‌ ಕಡಬ) newskadaba.com,ಜ.24 ಬಳ್ಳಾರಿ: ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣದ ಚರ್ಚೆ ಇನ್ನೂ ತಣ್ಣಗಾಗುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಗಂಭೀರ ಘಟನೆ ಸಂಭವಿಸಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಿ. ಶ್ರೀರಾಮುಲುಗೆ ಸೇರಿದ ಜಿ-ಸ್ಟಾರ್ ಲೇಔಟ್‌ನಲ್ಲಿರುವ ಮಾಡೆಲ್‌ ಮನೆಗೆ ಬೆಂಕಿ ಹಚ್ಚಲಾಗಿದೆ. ಈ ಕೃತ್ಯಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಲಾಗಿದ್ದು, ಪ್ರಕರಣ ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲಕ್ಕೆ ಕಾರಣವಾಗಿದೆ.

ಈ ಸಂಬಂಧ ಜನಾರ್ದನ ರೆಡ್ಡಿ ಅವರ ಸೈಟ್ ಇಂಜಿನಿಯರ್ ರಿಜ್ವಾನ್ ನೀಡಿದ ದೂರಿನ ಆಧಾರದಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗುಂಪು-ಗುಂಪಾಗಿ ಬಂದು ಬೆಂಕಿ ಹಚ್ಚಿದ ಆರೋಪ : ದೂರು ಪ್ರಕಾರ, ಸುಮಾರು 8ರಿಂದ 10 ಜನ ದುಷ್ಕರ್ಮಿಗಳು ಸ್ಥಳಕ್ಕೆ ಆಗಮಿಸಿ ಮಾದರಿ ಮನೆಯ ಬಾಗಿಲು ಹಾಗೂ ಕಿಟಕಿಗಳನ್ನು ಧ್ವಂಸಗೊಳಿಸಿದ್ದಾರೆ. ಕಿಟಕಿಯ ಗಾಜುಗಳನ್ನು ಒಡೆದು ಹಾಕಿದ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಅವಘಡದಲ್ಲಿ ಮನೆಯೊಳಗಿದ್ದ ಸುಮಾರು ರೂ.1 ಕೋಟಿ 25 ಲಕ್ಷ ಮೌಲ್ಯದ ಪರಿಕರಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿವೆ ಎಂದು ತಿಳಿದುಬಂದಿದೆ. 73 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಮಾಡೆಲ್‌ ಮನೆ : ಕಂಟೋನ್ಮೆಂಟ್ ಪ್ರದೇಶದಲ್ಲಿರುವ ತಮ್ಮ ಮಾಲೀಕತ್ವದ ಜಿ-ಸ್ಟಾರ್ ಲೇಔಟ್‌ನಲ್ಲಿ ಜನಾರ್ದನ ರೆಡ್ಡಿ ಅವರು ಸುಮಾರು ರೂ. 73 ಕೋಟಿ ವೆಚ್ಚದಲ್ಲಿ ಈ ಮಾದರಿ ಮನೆ ನಿರ್ಮಿಸಿದ್ದರು. ಲೇಔಟ್‌ನಲ್ಲಿನ ಮನೆಗಳ ವಿನ್ಯಾಸವನ್ನು ಗ್ರಾಹಕರಿಗೆ ಪ್ರದರ್ಶಿಸುವ ಉದ್ದೇಶದಿಂದ ಈ ಮಾಡೆಲ್‌ ಮನೆ ನಿರ್ಮಿಸಲಾಗಿತ್ತು. ಶುಕ್ರವಾರ ಸಂಜೆ ಈ ದುಷ್ಕರ್ಮಿಗಳ ಕೃತ್ಯದಿಂದಾಗಿ ಆಸ್ತಿ ನಷ್ಟವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಗಳು ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ.

Scroll to Top