ನೆಟ್ಟಣ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ► ಪವಾಡಸದೃಶ ಪಾರಾದ ಚಾಲಕ

(ನ್ಯೂಸ್ ಕಡಬ) newskadaba.com ಕಡಬ, ಮೇ.08. ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಸ್ವಿಫ್ಟ್ ಕಾರು ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದಾಗ ನೆಟ್ಟಣ ಡಿಪೋ ಬಳಿ ಬೃಹತ್ ಹಾಲುಮಡ್ಡಿ ಮರವೊಂದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಮರ್ಧಾಳದಿಂದ ಕೈಕಂಬವರೆಗೆ ರಸ್ತೆ ಬದಿಯಲ್ಲಿ ಹಾಲುಮಡ್ಡಿ ಮರಗಳನ್ನು ಕೊರೆದು ಎಣ್ಣೆ ತೆಗೆದು ಹಾಗೆಯೇ ಬಿಡುತ್ತಿರುವುದರಿಂದ ಈ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿರುವ ಉಳಿದ ಮರಗಳನ್ನು ತೆರವುಗೊಳಿಸದೆ ಇದ್ದಲ್ಲಿ ಮಳೆಗಾಲದಲ್ಲಿ ಹೆಚ್ಚಿನ ಅನಾಹುತ ಸಂಭವಿಸುವ ಸಂಭವವಿದೆ. ಸಂಬಂಧಪಟ್ಟವರು ಆದಷ್ಟು ಬೇಗ ಮರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ನೆಲ್ಯಾಡಿ: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿಹೋದ ಸ್ಕೂಟರ್ & ಸವಾರ ➤ ಧರ್ಮಸ್ಥಳ ಶೌರ್ಯ ತಂಡದಿಂದ ರಕ್ಷಣೆ

error: Content is protected !!
Scroll to Top