ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್ ನಿಧನ

(ನ್ಯೂಸ್‌ ಕಡಬ) newskadaba.com,ಜ.29  ಬೆಂಗಳೂರು: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.‌ಅವರಿಗೆ 84 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅವರ ನಿಧನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ.ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

Scroll to Top