(ನ್ಯೂಸ್ ಕಡಬ) newskadaba.com,ಜ.29 ದೆಹಲಿ: ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವ ವಿದ್ಯಾಲಯ ಧನಸಹಾಯ ಆಯೋಗ ಹೊರಡಿಸಿರುವ ನಿಯಮಾವಳಿಯನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿದೆ ..
ನಿಯಮಾವಳಿ ವಿರುದ್ಧ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಂದ ವ್ಯಾಪಕ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಕ್ರಮ ಕೈಗೊಂಡಿದೆ. ಹೊಸ ನಿಯಮಾವಳಿಯನ್ನು ತೀವ್ರವಾಗಿ ಟೀಕಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಇದು ಸಂಪೂರ್ಣ ಅಸ್ಪಷ್ಟತೆಯಿಂದ ಕೂಡಿದೆ ಎಂದು ಹೇಳಿದೆ.
ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಹೊರಡಿಸಿರುವ ನಿಯಮಾವಳಿಯಲ್ಲಿ ದೂರು ನೀಡಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ಇರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.ಭಾರತದ ಏಕತೆ ದೇಶದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಫಲಿಸಬೇಕು ಎಂದು ಮುಖ್ಯ ನ್ಯಾಯಾಧೀಶರು ಹೇಳಿದರು. ನಿಯಮಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಆತಂಕ ವ್ಯಕ್ತಪಡಿಸಿ ಕೇಂದ್ರ ಮತ್ತು ಯುಜಿಸಿಗೆ ನೋಟಿಸ್ ಸಹ ನೀಡಿದೆ.






