ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆ



(ನ್ಯೂಸ್ಕಡಬ) newskadaba.com,.29   ಮುಂಬೈ: ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ನೆರವೇರಿತು.





ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ಮಕ್ಕಳಾದ ಪಾರ್ಥ ಹಾಗೂ ಜಯ್ ಅಗ್ನಿಸ್ಪರ್ಶ ಮಾಡಿದರು. ಅಂತ್ಯಕ್ರಿಯೆಯಲ್ಲಿ ಅಜಿತ್ ಪವಾರ್ ಪತ್ನಿ ಸುನೇತ್ರಾ, ಕೇಂದ್ರ ಗೃಹ ಸಚಿವ ಅಮಿತ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.






ಅಂತ್ಯಕ್ರಿಯೆಗೂ ಮುನ್ನ ಸಾವಿರಾರು ಜನ ಅಜಿತ್ ಪವಾರ್ ಅವರಿಗೆ ಗೌರವ ನಮನ ಸಲ್ಲಿಸಿದರು. ಅಲ್ಲದೇ ಬೆಳಗ್ಗೆ 9 ಗಂಟೆಗೆ ವಿದ್ಯಾ ಪ್ರತಿಷ್ಠಾನ ಕ್ಯಾಂಪಸ್ ನಿಂದ 11 ಗಂಟೆವರೆಗೂ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಯಿತು. ಬಳಿಕ ಬಾರಾಮತಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಬುಧವಾರ ಬೆಳಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಟೇಬಲ್‌ಟಾಪ್ ರನ್‌ವೇಯ ಅಂಚಿನಿಂದ ಕೇವಲ 200 ಮೀಟರ್ ದೂರದಲ್ಲಿ ಚಾರ್ಟರ್ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿತ್ತು. ಈ ಅವಘಡದಲ್ಲಿ ಅವರು ಸೇರಿದಂತೆ ಅವರ ಭದ್ರತಾ ಸಿಬ್ಬಂದಿ ವಿದೀಪ್ ಜಾಧವ್, ಫ್ಲೈಟ್ ಅಟೆಂಡೆಂಟ್‌ಪಿಂಕಿ ಮಾಲಿ, ಪೈಲಟ್-ಇನ್-ಕಮಾಂಡ್ ಸುಮಿತ್ ಕಪೂರ್ ಮತ್ತು ಸೆಕೆಂಡ್-ಇನ್-ಕಮಾಂಡ್ ಶಾಂಭವಿ ಪಾಠಕ್ ಸಾವನ್ನಪ್ಪಿದ್ದರು.

error: Content is protected !!
Scroll to Top