ನಟ ಮಯೂರ್ ಪಟೇಲ್ ಕಿರಿಕ್ ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ!



(ನ್ಯೂಸ್ಕಡಬ) newskadaba.com,.30   ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ ಮಾಡಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆಓಲ್ಡ್ ಏರ್‌ರ್ಪೋರ್ಟ್  ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಯಲಾಗಿದೆ. ಈ ವೇಳೆ ಒಂದಕ್ಕೊಂದು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.





ಪಾರ್ಚೂನರ್ ಕಾರಿನಲ್ಲಿ ಮಯೂರ್ ಪಟೇಲ್ ಬರುತ್ತಿದ್ದರು. ತಾನೇ ಕಾರು ಚಲಾಯಿಸುತ್ತಿದ್ದರು. ವೇಗ ಮತ್ತು ಅಜಾಗರೂಕ ಚಾಲನೆಯಿಂದ ಅಪಘಾತ ಉಂಟಾಗಿದೆ. ಅಪಘಾತದಲ್ಲಿ ಎರಡು ಸ್ವಿಫ್ಟ್ ಡಿಜೈರ್ ಕಾರು, ಮತ್ತೊಂದು ಸರ್ಕಾರಿ ಕಾರು ಸೇರಿ ನಾಲ್ಕು ಕಾರುಗಳು ಜಖಂಗೊಂಡಿವೆ.






ಮಯೂರ್ ಪಟೇಲ್ ಕರೆತಂದು ಡ್ರಂಕ್ & ಡ್ರೈವ್ ಪರೀಕ್ಷೆ ನಡೆಸಲಾಯಿತು. ಡಿಡಿ ತಪಾಸಣೆ ವೇಳೆ ಪಾಸಿಟಿವ್ ಬಂದಿದೆ. ಜಖಂಗೊಂಡ ಕಾರು ಚಾಲಕರಿಂದ ಅಪಘಾತದ ಬಗ್ಗೆ ದೂರು ನೀಡಲಾಗಿದೆ. ಈ ಸಂಬಂಧ ನಟನ ವಿರುದ್ಧ ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

error: Content is protected !!
Scroll to Top