ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ – News Kadaba

ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ

(ನ್ಯೂಸ್‌ ಕಡಬ) newskadaba.com,ಫೆ,02: ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ.

ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ. ಈ ಮೂಲಕ ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಯಾವಾಗ ಬರುವುದೋ ಎಂದು ಅಧಿಕಾರಿಗಳ ಬಳಿ ಅಲೆದು ಬೇಸತ್ತಿದ್ದೀರಾ? ಇನ್ನು ಮುಂದೆ ಯಾರ ಬಳಿಯೂ ಹೋಗಬೇಕಿಲ್ಲ. ಇದಕ್ಕಾಗಿ ಬಂದಿದೆ ಸಹಾಯವಾಣಿ! ಹೌದು, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘181’ ಸಂಖ್ಯೆಯ ಸಹಾಯವಾಣಿಯನ್ನು ತೆರೆದಿದ್ದು, ಇದರಡಿ ಇದೇ ಮೊದಲ ಬಾರಿಗೆ ಗೃಹಲಕ್ಷ್ಮಿಯನ್ನೂ ತರಲಾಗಿದೆ..

ಕೆಲವೊಮ್ಮೆ ತಾಂತ್ರಿಕ ದೋಷಗಳಿಂದಲೋ ಅಥವಾ ಇ-ಕೆವೈಸಿ ಮಾಡಿಸದಿದ್ದರೆ ಇಲ್ಲವೇ ತೆರಿಗೆ ಪಾವತಿಸುತ್ತಿದ್ದರೆ ಇಂತಹ ಸಂದರ್ಭದಲ್ಲಿಗೃಹಲಕ್ಷ್ಮಿ ಹಣ ನಿಲ್ಲಿಸಲಾಗಿರುತ್ತದೆ. ಈ ಬಗ್ಗೆ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಖರವಾದ ಮಾಹಿತಿ ಪಡೆಯಬಹುದು. 181ಕ್ಕೆ ಕರೆ ಮಾಡಿದರೆ ಅಲ್ಲಿನ ಆಪರೇಟರ್‌ಗಳು ದೂರುದಾರರಿಂದ ಮಾಹಿತಿ ಪಡೆಯುತ್ತಾರೆ. ನಂತರ ದೂರುದಾರರು ಯಾವ ತಾಲೂಕಿಗೆ ಬರುವರೋ ಆ ತಾಲೂಕಿನ ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ರವಾನಿಸುವರು. ಅವರಿಂದ ಮಾಹಿತಿ ಪಡೆದು, ಫಲಾನುಭವಿಗಳಿಗೆ ತಲುಪಿಸುತ್ತಾರೆ.

 

 

Scroll to Top