(ನ್ಯೂಸ್ ಕಡಬ) newskadaba.com,ಫೆ,03: ರಾಜ್ಯದಲ್ಲಿ ಚಳಿಯ ವಾತಾವರಣವಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಮುಂಜಾನೆ, ಸಂಜೆಯ ವೇಳೆ ಚಳಿ ಹಾಗೂ ಮಂಜಿನ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲವೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.








