ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ



(ನ್ಯೂಸ್‌ ಕಡಬ) newskadaba.com,ಫೆ,03 ಮಂಗಳೂರು-ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.





ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದು ಅವರು ಸೂಚಿಸಿದರು. ರಾಷ್ಟ್ರ್ರೀಯ ಹೆದ್ದಾರಿಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾಷ್ಟ್ರ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗುವುದು.






ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದು ಅವರು ತಿಳಿಸಿದರು.ಇಂಗ್ಲಿಷ್ ಮೀಡಿಯಂ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಇಂಗ್ಲಿ? ಮಾಧ್ಯಮದಲ್ಲಿ ಬೋಧಿಸುತ್ತಿದ್ದರೂ, ಶಾಲೆಯ ನಾಮ ಫಲಕಗಳಲ್ಲಿ ಕನ್ನಡದಲ್ಲಿಯೂ ಹೆಸರು ಬರೆಯಬೇಕು. ಖಾಸಗಿ ಬಸ್ಸುಗಳ ಬೋರ್ಡುಗಳಲ್ಲಿ ಕನ್ನಡದಲ್ಲಿ ಊರಿನ ಹೆಸರು ಬರೆಯುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ನಗರದ ಮಾಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳ ನಾಮಫಲಕದಲ್ಲಿ ಹೆಸರನ್ನು ಕನ್ನಡದಲ್ಲಿ ನಮೂದಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

error: Content is protected !!
Scroll to Top