(ನ್ಯೂಸ್ ಕಡಬ) newskadaba.com,ಫೆ.03: ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಭಾಗ್ಯ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಸರ್ಕಾರ, ಸಮಗ್ರ ಶಿಕ್ಷಣ ಕರ್ನಾಟಕದಡಿ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್(Smart Class) ಸ್ಥಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ
. ಡಿಜಿಟಲ್ ಶಿಕ್ಷಣಕ್ಕೆ ಒತ್ತು:
ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೂ ಡಿಜಿಟಲ್ ಶಿಕ್ಷಣದ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಯೋಜನಾ ಅನುಮೋದನ ಮಂಡಳಿ, ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್ ಸ್ಥಾಪನೆಗೆ ಅನುಮೋದನೆ ನೀಡಿದ್ದು, ರಾಜ್ಯದ 3862 ಶಾಲೆಗಳಲ್ಲಿ 9154.80 ಲಕ್ಷ ರೂ. ಮೊತ್ತದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆ ಅನುಷ್ಠಾನಕ್ಕೆ ಹಸಿರು ನಿಶಾನೆ ನೀಡಿದೆ.








