ಗಾಂಧಿ ಪ್ರತಿಮೆ ಕಳವು ಪ್ರಕರಣ ಭಾರತೀಯ ರಾಯಭಾರ ಕಚೇರಿಯಿಂದ ತೀವ್ರ ಆಕ್ರೋಶ!



(ನ್ಯೂಸ್‌ ಕಡಬ) newskadaba.com,ಫೆ.05 ನವದೆಹಲಿ : ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಕತ್ತರಿಸಿ ಕದಿಯಲಾದ ಘಟನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಸ್ಟ್ರೇಲಿಯಾ ಸರ್ಕಾರವನ್ನು ಒತ್ತಾಯಿಸಿದೆ​…





ಮೆಲ್ಬೋರ್ನ್‌ನ ರೌವಿಲ್ಲೆ ಪ್ರದೇಶದಲ್ಲಿರುವ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿ ಸ್ಥಾಪಿಸಲಾಗಿದ್ದ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ. ಈ ಘಟನೆ ಭಾರತ-ಆಸ್ಟ್ರೇಲಿಯಾ ಸಂಬಂಧಗಳ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಘಟನೆಗೆ ಸಂಬಂಧಿಸಿ ಭಾರತವು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಮಾತುಕತೆ ನಡೆಸಿದ್ದು, ಪ್ರತಿಮೆಯನ್ನು ಕದ್ದವರನ್ನು ತಕ್ಷಣ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.






‘ದಿ ಆಸ್ಟ್ರೇಲಿಯಾ ಟುಡೇ’ ವರದಿಯ ಪ್ರಕಾರ, ಈ ಪ್ರತಿಮೆಯನ್ನು ನವದೆಹಲಿಯ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿ (ICCR) ಆಸ್ಟ್ರೇಲಿಯಾಗೆ ಉಡುಗೊರೆಯಾಗಿ ನೀಡಿತ್ತು. 2021ರ ನವೆಂಬರ್ 12ರಂದು ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಈ ಪ್ರತಿಮೆಯನ್ನು ಅಧಿಕೃತವಾಗಿ ಉದ್ಘಾಟಿಸಿದ್ದರು…..

error: Content is protected !!
Scroll to Top