(ನ್ಯೂಸ್ ಕಡಬ) newskadaba.com,ಫೆ.06: ರಾಜ್ಯದಲ್ಲಿ ಚಳಿಯ ಕಡಿಮೆಯಾಗುತ್ತಿದೆ. ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇರಲಿದ್ದು, ಮಧ್ಯಾಹ್ನದ ಬಿಸಿಲು ನೆತ್ತಿ ಸುಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.








