ಧರ್ಮಸ್ಥಳ: ಹದಗೆಟ್ಟಿರುವ ರಾಜಕೀಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ದಂಪತಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಮೇ.9. ಹದಗೆಟ್ಟಿರುವ ರಾಜಕೀಯಕ್ಕೆ ಮನನೊಂದು ದಂಪತಿಯು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಸ್ತುತ ರಾಜಕರಣವು ಭ್ರಷ್ಟಾಚಾರದಿಂದ ತುಂಬಿ ಹೋಗಿದೆ. ರಾಜಕೀಯದಲ್ಲಿ ಜನರು ಆಮಿಷಕ್ಕೆ ಒಳಗಾಗಿ ಯಾವುದೇ ನೀಚ ಕೃತ್ಯಕ್ಕೂ ಹೇಸುವುದಿಲ್ಲ, ಇದರಿಂದ ಮನನೊಂದು ತಾವು ಆತ್ಮಹತ್ಯೆ ಮಾಡುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ, ಹಾಗು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಈ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಬರೆದಿದ್ದಾರೆ ಅದಕ್ಕಾಗಿ ನಾವು ಧರ್ಮಸ್ಥಳದಲ್ಲಿ ಆತ್ಮಹತ್ಯೆ ಮಾಡುತ್ತಿರುವುದಾಗಿ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ಶರಣಾದವರನ್ನು ಹಾವೇರಿ ಜಿಲ್ಲೆ ಬ್ಯಾಡಗಿ ಮೂಲದ ಮೃತ್ಯುಂಜಯ ಹಾಗು ಅವರ ಪತ್ನಿ ನೇತ್ರಾವತಿ ಎಂದು ಗುರುತಿಸಲಾಗಿದೆ. ಇವರು ಬ್ಯಾಡಗಿ ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ಎಸ್.ಆರ್.ಪಾಟೀಲ್ ರ ಸಂಬಂಧಿಯಾಗಿರುತ್ತಾರೆ.

Also Read  ಹಿಜಾಬ್ ಪ್ರಕರಣದ ತೀರ್ಪಿನ ಹಿನ್ನೆಲೆ ➤ ದ.ಕ, ಉಡುಪಿ ಜಿಲ್ಲಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ...!!

error: Content is protected !!
Scroll to Top