ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ, ಲಾಠಿ ಚಾರ್ಜ್ ► ಕೈಕಂಬ, ಬಂಟ್ವಾಳದಲ್ಲಿ ಉದ್ವಿಗ್ನ ವಾತಾವರಣ

(ನ್ಯೂಸ್ ಕಡಬ) newskadaba.com ಕಡಬ, ಜು.08. ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೀಡಾಗಿ ಆಸ್ಪತ್ರೆಯಲ್ಲಿ ಮೃತರಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ಶವಯಾತ್ರೆಯ ವೇಳೆ ಕೈಕಂಬದಲ್ಲಿ ಕಲ್ಲುತೂರಾಟ ನಡೆದಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ.

ಮೃತದೇಹವನ್ನು ಸಂಘಪರಿವಾರದ ಕಾರ್ಯಕರ್ತರು ಬಿ.ಸಿ.ರೋಡ್ ನಲ್ಲಿ ಇಳಿಸಲು ಅಣಿಯಾದಾಗ ವಿರೋಧ ವ್ಯಕ್ತಪಡಿಸಿದ ಪೊಲೀಸರ ಮಧ್ಯೆ ಮಾತಿನ ಚಕಮಕಿ ಉಂಟಾಗಿದ್ದು, ವಾಹನಗಳು, ಅಂಗಡಿಗಳಿಗೆ ದುಷ್ಕರ್ಮಿಗಳು ಕಲ್ಲೆಸೆದ ಪರಿಣಾಮ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ.

Scroll to Top