ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ



(ನ್ಯೂಸ್ಕಡಬ) newskadaba.com,  ಫೆ.13:  ನಿತ್ಯ ನೀತಿ : ಅಧರ್ಮದಿಂದ ಶತ್ರು ಕೆಲವು ಬಾರಿ ಗೆಲ್ಲಬಹುದು.! ಆದರೆ ಕರ್ಮ ಎದುರಾಗುವ ವೇಳೆಗೆ ಧರ್ಮ ಅವನನ್ನು ಸುಡಲು ಪ್ರಾರಂಭಿಸಿರುತ್ತದೆ. ಅವನ ನಿರ್ನಾಮ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.! -ಭಗವದ್ಗೀತೆ





ಪಂಚಾಂಗ : ಶುಕ್ರವಾರ






ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಏಕಾದಶಿ / ನಕ್ಷತ್ರ: ಮೂಲಾ / ಯೋಗ: ವಜ್ರ / ಕರಣ: ಕೌಲವ
ಸೂರ್ಯೋದಯ – 06.44
ಸೂರ್ಯಾಸ್ತ – 6.25
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :

ಮೇಷ: ಬಂಧುಗಳೊಂದಿಗೆ ವೈಮನಸ್ಸು ಉಂಟಾಗ ದಂತೆ ನೋಡಿಕೊಳ್ಳಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ವೃಷಭ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ಪ್ರತಿಭೆಗೆ ತಕ್ಕ ಪ್ರತಿಲ ದೊರೆಯುವುದು.
ಮಿಥುನ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಿರಿಯರ ಆಶೀರ್ವಾದ ಸದಾ ಕಾಲ ನಿಮೊಂದಿಗಿರುತ್ತದೆ.

ತುಲಾ: ನೀವು ಕಂಡ ಕನಸು ಗಳಿಗೆ ಸ್ನೇಹಿತರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಪ್ರಯತ್ನಗಳು ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

ಮಕರ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಕುಂಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

error: Content is protected !!
Scroll to Top