(ನ್ಯೂಸ್ ಕಡಬ) newskadaba.com, ಫೆ.18: ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಲ್ಕೆಜಿ ವಿದ್ಯಾರ್ಥಿಯೊಬ್ಬನು ಶಾಲಾ ಬಸ್ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಖಾಸಗಿ ಶಾಲೆಯ ಬಸ್ ನಿತ್ಯದಂತೆ ಮಕ್ಕಳನ್ನು ಶಾಲೆಯಿಂದ ಮನೆಗೆ ಬಿಟ್ಟು ಹಿಂತಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.ವಿದ್ಯಾರ್ಥಿಗಳನ್ನು ಕೆಳಗಿಳಿಸಿದ ನಂತರ ಚಾಲಕನು ಹಿಂಭಾಗ ಗಮನಿಸದೇ ಬಸ್ ಅನ್ನು ರಿವರ್ಸ್ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಹಿಂಭಾಗಕ್ಕೆ ಬಂದಿದ್ದ ಬಾಲಕ ಚಾಲಕರ ಗಮನಕ್ಕೆ ಬಾರದೆ ಬಸ್ ಹಿಂಬದಿ ಚಕ್ರದಡಿ ಸಿಲುಕಿದ್ದಾನೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಬಾಲಕನ ಪೋಷಕರ ಆಕ್ರಂದನ ಮನಕಲುಕುವಂತಿತ್ತು.ಘಟನೆಯ ವೇಳೆ ಬಸ್ ಚಾಲಕರಾಗಿ ಅನಿಲ್ ರೆಡ್ಡಿ ಕರ್ತವ್ಯ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ಶಾಲಾ ಮಕ್ಕಳ ಸುರಕ್ಷತೆ ವಿಚಾರದಲ್ಲಿ ನಿರ್ಲಕ್ಷ್ಯ ನಡೆದಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿದೆ.ಘಟನಾ ಮಾಹಿತಿ ತಿಳಿಯುತ್ತಿದ್ದಂತೆಯೇ ಗುರುಮಠಕಲ್ ಪೆÇಲೀಸ್ ಠಾಣೆಯ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ತನಿಖೆ ಮುಂದುವರೆದಿದೆ.ಈ ದುರ್ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.












