ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ|ರಘು 15 ಸಾವಿರ ಮತಗಳ ಅಂತರದ ಗೆಲುವು ನಿಶ್ಚಿತ ► ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶೀರಾಡಿ

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆಯನ್ನು ಬಯಸಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ|ರಘು ಅವರು 15 ಸಾವಿರ ಮತಗಳ ಅಂತರದಲ್ಲಿ ಅಭೂತಪೂರ್ವ ವಿಜಯ ಸಾಧಿಸಲಿದ್ದಾರೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಅವರು ಭರವಸೆ ವ್ಯಕ್ತಪಡಿಸಿದರು.

ಅವರು ಗುರುವಾರ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ತಯಾರಿಯು ಈ ಬಾರಿ ಬಹಳ ವ್ಯವಸ್ಥಿತವಾಗಿ ನಡೆದಿದ್ದು, ಪಕ್ಷದ ಕಾರ್ಯಕರ್ತರು ಕ್ಷೇತ್ರದ ಪ್ರತಿ ಮನೆಗಳಿಗೆ 3 ಬಾರಿಯಂತೆ ಭೇಟಿ ನೀಡಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಜನಪರ ಕಾರ್ಯಕ್ರಮಗಳನ್ನು ಮತದಾರರಿಗೆ ಮನದಟ್ಟು ಮಾಡುವಲ್ಲಿ ನಮ್ಮ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ. ಮುಖ್ಯವಾಗಿ ಕಳೆದ ಐದು ಅವಧಿಯಲ್ಲಿ ಗೆದ್ದಿರುವ ಶಾಸಕ ಎಸ್. ಅಂಗಾರ ಅವರು ಕ್ಷೇತ್ರದ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸದೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅವರು ಕೇವಲ ಭೂಮಿ ಪೂಜೆ ಮತ್ತು ಬ್ಯಾನರುಗಳನ್ನು ಅಳವಡಿಸುವುದು ಹೊರತುಪಡಿಸಿ ಯಾವುದೇ ಅಭಿವದ್ಧಿ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಲ್ಲ ಎಂಬ ಅಭಿಪ್ರಾಯ ಕ್ಷೇತ್ರದ ಜನರಲ್ಲಿ ಮೂಡಿದೆ. ಸಿದ್ಧರಾಮಯ್ಯ ಸರಕಾರವು ಕಡಬ ತಾಲೂಕು ಘೋಷಣೆ, ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಸ್ಥಾಪನೆ, ಸುಸಜ್ಜಿತ ರಸ್ತೆಗಳು, ಕಡಬಕ್ಕೆ ಸಂಪರ್ಕ ಕಲ್ಪಿಸುವ ಗುಂಡ್ಯ ಹೊಳೆಗೆ ಉದನೆಯಲ್ಲಿ ಸೇತುವೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸುವಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ|ರಘು ಅವರು ಅವಿರತ ಶ್ರಮವಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಸುಳ್ಯ ಕ್ಷೇತ್ರಕ್ಕೆ ಹೆಚ್ಚಿನ ಗಮನ ಹರಿಸಿ ಅಭಿವೃದ್ಧಿಗೆ ಮುತುವರ್ಜಿ ವಹಿಸಿರುವುದು ಕೂಡ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಿದೆ. ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಸರಕಾರದ ರೈತ ವಿರೋಧಿ ಕೃಷಿ ನೀತಿ, ನೋಟ್ ಬ್ಯಾನ್, ಜಿಎಸ್ಟಿ ಹೇರಿಕೆ, ಇಂಧನಗಳ ಬೆಲೆ ಏರಿಕೆ, ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರಕ್ಕೆ ಅವಕಾಶ ನೀಡಲಿದ್ದಾರೆ ಎಂದು ದಿವಾಕರ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

Also Read  ಕೋವಿಡ್ -19 ಸಂಕಷ್ಟ➤ ನಷ್ಟದ ಭೀತಿಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ

ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್, ಪ್ರಚಾರ ಸಮಿತಿಯ ಅಧ್ಯಕ್ಷ ರೋಯಿ ಅಬ್ರಹಾಂ, ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಪ್ರಮುಖರಾದ ಸತೀಶ್ ಕುಮಾರ್ ಕೆಡೆಂಜಿ, ವಿ.ಎಂ. ಕುರಿಯನ್, ಸೆಬಾಸ್ಟಿಯನ್ ಶಿರಾಡಿ, ರಾಮಕಷ್ಣ ಹೊಳ್ಳಾರು, ಟಿ.ಎಂ. ಮ್ಯಾಥ್ಯು, ಜ್ಯೋತಿ ಡಿ.ಕೋಲ್ಪೆ, ಸತೀಶ್ ನಾ`ಕ್ ಮೇಲಿನಮನೆ, ನಾರಾಯಣ ಗೌಡ ಅಲುಂಗೂರು, ಚಂದ್ರಶೇಖರ ಕರ್ಕೇರ ಮುಂತಾದವರು ಉಪಸ್ಥಿತರಿದ್ದರು.

Also Read  ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

error: Content is protected !!
Scroll to Top